12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: 65 ವರ್ಷದ ವೃದ್ಧನಿಂದ ಅತ್ಯಾಚಾರ, ಗರ್ಭಿಣಿಯಾದ ಅಪ್ರಾಪ್ತೆ!
ಮುಂಡಗೋಡ: ಕೇವಲ 12 ವರ್ಷದ ಆರನೇ ತರಗತಿ ವಿದ್ಯಾರ್ಥಿನಿಯ ಮೇಲೆ 65 ವರ್ಷದ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಆಘಾತಕಾರಿ ಪ್ರಕರಣ ಜಿಲ್ಲೆಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮುಖ್ಯಾಂಶಗಳು
- •ಈ ಸಂಬಂಧ ಮುಂಡಗೋಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
- •ಆರನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ಬಾಲಕಿ ಈ ಪ್ರಕರಣದ ಸಂತ್ರಸ್ತೆಯಾಗಿದ್ದಾಳೆ.
- •ಅಲ್ಲದೆ, ಚಾಕು ತೋರಿಸಿ ಬೆದರಿಕೆ ಹಾಕಿದ್ದಲ್ಲದೆ, ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಜೀವ ತೆಗೆಯುವುದಾಗಿ ಹೆದರಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
- •ಈ ಪ್ರಕರಣದ ಅತ್ಯಂತ ಆಘಾತಕಾರಿ ಸಂಗತಿಯೆಂದರೆ, ಬಾಲಕಿ ಈಗಾಗಲೇ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದಾಳೆ ಎನ್ನಲಾಗಿದೆ.
ಮುಂಡಗೋಡ:
ಕೇವಲ 12 ವರ್ಷದ ಆರನೇ ತರಗತಿ ವಿದ್ಯಾರ್ಥಿನಿಯ ಮೇಲೆ 65 ವರ್ಷದ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಆಘಾತಕಾರಿ ಪ್ರಕರಣ ಜಿಲ್ಲೆಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಸಂಬಂಧ ಮುಂಡಗೋಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪುಸಲಾಯಿಸಿ, ಚಾಕು ತೋರಿಸಿ ಬೆದರಿಕೆ
ತಾಲೂಕಿನ ಇಸ್ಮಾಯಿಲ್ ಹುಲಗೂರ (65) ಬಂಧಿತ ಆರೋಪಿಯಾಗಿದ್ದಾನೆ. ಆರನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ಬಾಲಕಿ ಈ ಪ್ರಕರಣದ ಸಂತ್ರಸ್ತೆಯಾಗಿದ್ದಾಳೆ. ಸಂತ್ರಸ್ತೆ ಪರಿಶಿಷ್ಟ ಪಂಗಡಕ್ಕೆ ಸೇರಿದವಳಾಗಿದ್ದು, ಆರೋಪಿಯು ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.
ಅಲ್ಲದೆ, ಚಾಕು ತೋರಿಸಿ ಬೆದರಿಕೆ ಹಾಕಿದ್ದಲ್ಲದೆ, ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಜೀವ ತೆಗೆಯುವುದಾಗಿ ಹೆದರಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಯ ಬೆದರಿಕೆಯಿಂದಾಗಿ ಬಾಲಕಿ ನಡೆದ ಘಟನೆಯನ್ನು ಯಾರ ಬಳಿಯೂ ಹೇಳಿಕೊಳ್ಳದೆ ಮೌನವಾಗಿದ್ದಳು ಎನ್ನಲಾಗಿದೆ.
ಒಂಬತ್ತು ತಿಂಗಳ ಗರ್ಭಿಣಿಯಾದ ಬಾಲಕಿ!
ಈ ಪ್ರಕರಣದ ಅತ್ಯಂತ ಆಘಾತಕಾರಿ ಸಂಗತಿಯೆಂದರೆ, ಬಾಲಕಿ ಈಗಾಗಲೇ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದಾಳೆ ಎನ್ನಲಾಗಿದೆ. ಇನ್ನೊಂದು ವಾರದೊಳಗೆ ಹೆರಿಗೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಗಳ ಆರೋಗ್ಯದಲ್ಲಿ ಇಂತಹ ಗಂಭೀರ ಬದಲಾವಣೆ ಸಂಭವಿಸಿದ್ದರೂ ಮನೆಯವರಿಗೆ ಆಕೆ ಗರ್ಭಿಣಿಯಾಗಿರುವ ವಿಚಾರ ತಿಳಿದಿರಲಿಲ್ಲ. ಇತ್ತೀಚೆಗೆ ಬಾಲಕಿ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ಆಕೆಯನ್ನು ಗಮನಿಸಿದ ಮನೆಯವರಿಗೆ ಅನುಮಾನ ಮೂಡಿದೆ. ನಂತರ ವೈದ್ಯಕೀಯ ತಪಾಸಣೆ ನಡೆಸಿದಾಗ ಗರ್ಭಿಣಿಯಾಗಿರುವ ಸಂಗತಿ ಬಹಿರಂಗವಾಗಿದೆ ಎನ್ನಲಾಗಿದೆ.
ಈ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದು, ಪ್ರಕರಣ ಪೊಲೀಸರ ಗಮನಕ್ಕೆ ಬಂದಿದೆ. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಸಂಘಟನೆಗಳಿಂದ ತೀವ್ರ ಆಕ್ರೋಶ
ಬಾಲಕಿಯ ಮೇಲಿನ ದೌರ್ಜನ್ಯದ ಸುದ್ದಿ ಹರಡುತ್ತಿದ್ದಂತೆ ದಲಿತ ಹಾಗೂ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಅಪ್ರಾಪ್ತ ಬಾಲಕಿಯ ಬದುಕನ್ನೇ ಕತ್ತಲೆಗೆ ತಳ್ಳಿರುವ ಇಂತಹ ಕೃತ್ಯ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.
ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣದ ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ನ್ಯಾಯಾಲಯದಲ್ಲಿ ಬಲವಾದ ಸಾಕ್ಷ್ಯಗಳನ್ನು ಮಂಡಿಸಬೇಕು. ಇಂತಹ ಅಮಾನವೀಯ ಕೃತ್ಯ ಎಸಗಿದ ಆರೋಪಿಗೆ ಗರಿಷ್ಠ ಶಿಕ್ಷೆ, ಮರಣದಂಡನೆ ವಿಧಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.
📢 ಸಂಪಾದಕೀಯ ತಿದ್ದುಪಡಿ ಮತ್ತು ಸ್ಪಷ್ಟೀಕರಣ:
ಈ ಸುದ್ದಿಯಲ್ಲಿ ತಪ್ಪು ಕಂಡುಬಂದರೆ ನಮ್ಮ ಸಂಪಾದಕೀಯ ತಂಡಕ್ಕೆ ತಿಳಿಸಿ, ನಾವು ಸರಿಪಡಿಸುತ್ತೇವೆ. ಇಮೇಲ್ ಮಾಡಿ: news@sirwar360.in ಅಥವಾ ಕರೆ ಮಾಡಿ: +91 94480 36036.
ಸಂಬಂಧಿತ ಸುದ್ದಿಗಳು
Uttara Kannadaಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭದ ಆಮಿಷ: ನಿವೃತ್ತ ನೌಕರನಿಗೆ ₹46 ಲಕ್ಷ ಪಂಗನಾಮ!
ಶಿರಸಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಭಾರಿ ಲಾಭ ಗಳಿಸಬಹುದು ಎಂಬ ಆಮಿಷವೊಡ್ಡಿ ನಿವೃತ್ತ ನೌಕರರೊಬ್ಬರಿಗೆ ಬರೋಬ್ಬರಿ ₹46 ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ…
Uttara Kannadaಶಿರಸಿ, ಯಲ್ಲಾಪುರ, ಮುಂಡಗೋಡ ಆಕಾಶದಲ್ಲಿ ಅಪರಿಚಿತ ವಿಮಾನದ ರಂಗವಲ್ಲಿ: ಜನರನ್ನು ಎಚ್ಚರಿಸಬೇಕಿದ್ದ ಇಲಾಖೆಗಳು ನಿದ್ರೆಯಲ್ಲಿ
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕುಗಳ ಆಕಾಶದಲ್ಲಿ ಕಳೆದ ಹತ್ತು ದಿನಗಳಿಂದ ಅಪರಿಚಿತ ವಿಮಾನವೊಂದು ಪದೇಪದೆ ತೀರಾ ಕೆಳಮಟ್ಟದಲ್ಲಿ ಹಾರಾಟ…


